BIG NEWS: ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ: ಇನ್ಮುಂದೆ ತಪ್ಪಿತಸ್ಥರ ವಿರುದ್ಧ ದಾಖಲಾಗುತ್ತೆ ಕ್ರಿಮಿನಲ್ ಕೇಸ್!

ಬೆಂಗಳೂರು: ಕಾನೂನು ಕ್ರಮಗಳ ಬಗ್ಗೆ ಎಷ್ಟೇ ಎಚ್ಚರಿಕೆ ನೀಡಿದರೂ ರಾಜ್ಯದಲ್ಲಿ ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣಗಳು ನಡೆಯುತ್ತಲೇ ಇದೆ. ಇಂತಹ ಅನಿಷ್ಠ ಪದ್ಧತಿಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಇನ್ಮುಂದೆ ಬಾಲ್ಯ ವಿವಾಹ ಪ್ರಕರಣ ನಡೆದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಸರಿಯಾಗಿ ನಿಗಾ ವಹಿಸಿ, ವರದಿ ನೀಡದ PDO ಗಳು ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಿ. ಅಗತ್ಯ ಇರುವ ಕಡೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ಇನ್ನು ಶೇಕಡಾವಾರು ತೀವ್ರ ಅಪೌಷ್ಠಿಕ ಮಕ್ಕಳ ಸಂಖ್ಯೆ ಹೆಚ್ಚಾಗಿರುವ ಜಿಲ್ಲೆಗಳ ಪ್ರತೀ ವರ್ಷ ನಿಮ್ಮ ನಿಮ್ಮ ಜಿಲ್ಲೆಗಳಲ್ಲಿ ಶೇ.1 ರಷ್ಟು ಕಡಿಮೆ ಮಾಡಿಕೊಂಡು ಹೋಗಲು ಸಾಧ್ಯವಿದೆ. ಒಂದೇ ಸಾರಿಗೆ ನಿಲ್ಲಿಸಲು ಸಾಧ್ಯವಿಲ್ಲ ಎನ್ನುವುದಕ್ಕೆ ಸಾಮಾಜಿಕ ಕಾರಣಗಳೂ ಇವೆ. ಆದ್ದರಿಂದ ಪ್ರತೀ ವರ್ಷ ಶೇ.1 ರಷ್ಟು ಪ್ರಮಾಣ ಕಡಿಮೆ ಮಾಡಿಕೊಂಡು ಬಂದರೆ ಅಪೌಷ್ಠಿಕ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎನ್ನುವ ಸೂಚನೆ ನೀಡಿದರು. ಪ್ರಮುಖವಾಗಿ ಬೀದರ್‌, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಿಎಂ ಈ ಸೂಚನೆ ನೀಡಿದರು.

ಮಕ್ಕಳ ಹಿಮೋಗ್ಲೋಬಿನ್‌ ಪ್ರಮಾಣ ಸೇರಿ ಅವರ ಆರೋಗ್ಯ ತಪಾಸಣೆ ನಿರಂತರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಹಾಳಿ, ಮೊಟ್ಟೆ, ಮಾತ್ರೆ ಎಲ್ಲವನ್ನೂ ಕೊಡುತ್ತಿದ್ದರೂ ಏಕೆ ಕೆಲವು ಕಡೆ ಮಹಿಳೆಯರ ಮತ್ತು ಮಕ್ಕಳ ಪೌಷ್ಠಿಕ ಮಟ್ಟ ಮಾತ್ರ ಸುಧಾರಿಸುತ್ತಿಲ್ಲ ಎನ್ನುವ ಬಗ್ಗೆ ವೈಜ್ಞಾನಿಕ ವರದಿ ನೀಡಿ, ವರದಿ ಆಧಾರದಲ್ಲಿ ಅಗತ್ಯ ಸುಧಾರಣಾ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read