HomeKarnatakaದೇವಸ್ಥಾನದಲ್ಲಿ ಅಪ್ರಾಪ್ತ ಬಾಲಕಿ ಮದುವೆಯಾದ ಯುವಕನಿಗೆ ಬಿಗ್ ಶಾಕ್

ದೇವಸ್ಥಾನದಲ್ಲಿ ಅಪ್ರಾಪ್ತ ಬಾಲಕಿ ಮದುವೆಯಾದ ಯುವಕನಿಗೆ ಬಿಗ್ ಶಾಕ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಾವಲು ಚೌಡಮ್ಮ ದೇವಸ್ಥಾನದಲ್ಲಿ ರಂಗವ್ವನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಸೋಮಗುದ್ದು ಗ್ರಾಮದ ಎಂ.ಲಿಂಗರಾಜು ಎಂಬುವವರ ವಿರುದ್ದ ಬಾಲ್ಯ ವಿವಾಹ ಪ್ರಕರಣ ದಾಖಲಾಗಿದೆ.

ಬಾಲ್ಯ ವಿವಾಹ ಕುರಿತು ಮಾಹಿತಿ ತಿಳಿದು ಬಂದ ಕೂಡಲೇ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಂ.ಲಿಂಗರಾಜು ವಿರುದ್ದ ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಅ.4 ರಂದು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular