HomeKarnatakaನಿಮ್ಮ ಫೋನ್ ನಲ್ಲಿ ಮಕ್ಕಳ ಅಶ್ಲೀಲ ದೃಶ್ಯ ನೋಡಿದ್ರೆ ಯಾರಿಗೂ ತಿಳಿಯಲ್ಲ ಎಂದುಕೊಂಡವರಿಗೆ ಶಾಕ್

ನಿಮ್ಮ ಫೋನ್ ನಲ್ಲಿ ಮಕ್ಕಳ ಅಶ್ಲೀಲ ದೃಶ್ಯ ನೋಡಿದ್ರೆ ಯಾರಿಗೂ ತಿಳಿಯಲ್ಲ ಎಂದುಕೊಂಡವರಿಗೆ ಶಾಕ್

ರಾಮನಗರ: ಯಾರಿಗೂ ತಿಳಿಯಲ್ಲ ಎಂದುಕೊಂಡು ಮೊಬೈಲ್ ನಲ್ಲಿ ಮಕ್ಕಳ ಅಶ್ಲೀ ದೃಶ್ಯ ವೀಕ್ಷಣೆ, ಡೌನ್ಲೋಡ್ ಹಂಚಿಕೆ ಮಾಡುವವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಮೊಬೈಲ್ ದೃಶ್ಯ ವೀಕ್ಷಣೆ ಮೇಲೆ ಕೇಂದ್ರ ಸರ್ಕಾರ ನಿಗಾ ವಹಿಸಿದೆ. ಎನ್‌ಸಿಎಂಇಸಿ ವಿಭಾಗ ನಿಮ್ಮ ಮೊಬೈಲ್ ಮೇಲೆ ಮತ್ತು ಇತರ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು ಇಟ್ಟಿದೆ.

ರಾಮನಗರ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಮಕ್ಕಳ ದೃಶ್ಯಗಳ ವೀಕ್ಷಣೆ ಮತ್ತು ಡೌನ್ಲೋಡ್ ಮಾಡಿಕೊಂಡ ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಕೇಂದ್ರ ಸರ್ಕಾರದ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ವ್ಯಾಪ್ತಿಯ ಎನ್‌ಸಿಎಂಇಸಿ(ರಾಷ್ಟ್ರೀಯ ಕಾಣೆಯಾದ ಮತ್ತು ಶೋಷಿತ ಮಕ್ಕಳ ಕೇಂದ್ರ) ಮಕ್ಕಳ ಅಶ್ಲೀಲ ಚಿತ್ರಗಳು ಆನ್ಲೈನ್ ನಲ್ಲಿ ಬಿತ್ತರವಾಗುವುದನ್ನು ತಡೆಯಲು ತೀವ್ರ ನಿಗಾ ವಹಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊಬೈಲ್ ನಲ್ಲಿ ಆನ್ಲೈನ್ ಪೋರ್ನ್ ಸೈಟ್ ಗಳ ಮೂಲಕ ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ, ಡೌನ್ಲೋಡ್ ಮಾಡಿದ ಮತ್ತು ಅಪ್ಲೋಡ್ ಮಾಡಿದ ವ್ಯಕ್ತಿಗಳ ವಿವರ, ಐಪಿ ವಿಳಾಸ, ಮೊಬೈಲ್ ಸಂಖ್ಯೆಯೊಂದಿಗೆ ಮಾಹಿತಿ ಸಂಗ್ರಹಿಸಿ ಅದನ್ನು ಸಿಐಡಿ ವಿಭಾಗಕ್ಕೆ ಕಳುಹಿಸಲಾಗುತ್ತದೆ. ಸಿಐಡಿ ಐಟಿ ಸೆಲ್ ವಿಭಾಗದ ಅಧಿಕಾರಿಗಳು ಅದನ್ನು ಪರಿಶೀಲಿಸಿ ಜಿಲ್ಲಾ ಸೈಬರ್ ಘಟಕಕ್ಕೆ ಕಳುಹಿಸಿಕೊಡುತ್ತಾರೆ. ಇಂತಹ ಕೃತ್ಯವೆಸಗಿದವರಿಗೆ 5 ವರ್ಷದವರೆಗೆ ಜೈಲು ಶಿಕ್ಷೆ 10 ಲಕ್ಷ ರೂ.ವರೆಗೆ ದಂಡ ವಿಧಿಸುವ ಅವಕಾಶವಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular