HomeKarnatakaಮಗುವಿಗೆ ಖೈದಿಯಂತೆ ಬಟ್ಟೆ ತೊಡಿಸಿ, ಫೋಟೋಶೂಟ್ ಮಾಡಿಸಿದ್ದ ಪೋಷಕರಿಗೆ ಸಂಕಷ್ಟ

ಮಗುವಿಗೆ ಖೈದಿಯಂತೆ ಬಟ್ಟೆ ತೊಡಿಸಿ, ಫೋಟೋಶೂಟ್ ಮಾಡಿಸಿದ್ದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಮೇಲಿನ ಹುಚ್ಚು ಅಭಿಮಾನದಿಂದ ವ್ಯಕ್ತಿಯೊಬ್ಬ ತನ್ನ ಮಗುವಿಗೆ ಖೈದಿಯಂತೆ ಬಟ್ಟೆ ತೊಡಿಸಿ, ಖೈದಿ ನಂಬರ್ ಕೊಟ್ಟು ಫೋಟೋಶೂಟ್ ಮಾಡಿಸಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಮಕ್ಕಳ ಹಕ್ಕುಗಳ ಆಯೋಗ ಮುಂದಾಗಿದೆ.

ಮಗುವಿಗೆ ಖೈದಿ ರೀತಿ ಬಟ್ಟೆ ಹಾಕಿ, ಖೈದಿ ನಂಬರ್, ಕೈ ಕೋಳವನಿಟ್ಟು ಫೋಟೋ ಶೂಟ್ ಮಾಡಿ ಆ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ಸಂಭ್ರಮಿಸಿದ್ದ ಮಗುವಿನ ಪೋಷಕರಿಗೆ ಇದೀಗ ಸಂಕಷ್ಟ ಎದುರಾಗಿದೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಮಗುವಿನ ಪೋಷಕರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಈ ವಿಚಾರವಾಗಿ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದು, ಪೊಲೀಸರ ಮೂಲಕ ಪೋಷಕರ ಪತ್ತೆಗೆ ಮುಂದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಪ್ರತಿಕ್ರಿಯೆ ನೀಡಿದ್ದು, ಈ ರೀತಿ ಮಕ್ಕಳಿಗೆ ಖೈದಿಯಂತೆ ಬಿಂಬಿಸಿ ಫೋಟೋ ತೆಗೆಯುವುದು ಖಂಡನೀಯ. ಫೋಟೋಶೂಟ್ ಮಾಡಿಸಿದವರನ್ನು ಪತ್ತೆ ಮಾಡಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular