HomeKarnatakaಆಟವಾಡುತ್ತ ಸಂಪ್ ಗೆ ಬಿದ್ದ ಎರಡೂವರೆ ವರ್ಷದ ಮಗು ದಾರುಣ ಸಾವು

ಆಟವಾಡುತ್ತ ಸಂಪ್ ಗೆ ಬಿದ್ದ ಎರಡೂವರೆ ವರ್ಷದ ಮಗು ದಾರುಣ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದೆ. ಮಕ್ಕಳು ಆಟವಾಡುತ್ತಿದ್ದಾರೆ ಎಂದುಕೊಂಡು ತಂದೆ-ತಾಯಿ ತೋರುವ ಸಣ್ಣದೊಂದು ನಿರ್ಲಕ್ಷ ಎಂಥಹ ದುರಂತಕ್ಕೆ ಕಾರಣವಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಮನೆ ಬಳಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗು ನೀರಿನ ಸಂಪ್ ಗೆ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ಚಿರಾಗ್ ಮೃತ ಮಗು. ಅಣ್ಣಯ್ಯ ಹಾಗೂ ಋತು ದಂಪತಿಯ ಮಗು.

ದಂಪತಿ ಸಂಬಂಧಿಕರ ಮದುವೆಗೆ ತೆರಳಲು ಸಿದ್ಧರಾಗುತ್ತಿದ್ದರು. ಕಾರು ತೊಳೆಯಲು ಸಂಪನ್ ಕ್ಯಾಪ್ ತೆರೆದು ಅಣ್ಣಯ್ಯ ಮನೆಯ ಒಳಗೆ ತೆರಳಿದ್ದರು. ಈ ವೇಳೆ ಅಲ್ಲಿಯೇ ಆಟವಾಡುತ್ತಿದ್ದ ಮಗು ಸಂಪ್ ಒಳಗೆ ಬಿದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆಯ ಹೊರಗೆ ಬಂದು ಅಣ್ಣಯ್ಯ ನೋಡುವಷ್ಟರಲ್ಲಿ ಮಗು ಸಂಪ್ ನೀರ‍ಿಗೆ ಬಿದ್ದು ಮೃತಪಟ್ಟಿದೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular