HomeKarnataka5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ಉಚಿತವಾಗಿ ಅಪ್ಡೇಟ್ ಮಾಡಲು ಅವಕಾಶ

5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ಉಚಿತವಾಗಿ ಅಪ್ಡೇಟ್ ಮಾಡಲು ಅವಕಾಶ

ಬಳ್ಳಾರಿ: ಜಿಲ್ಲೆಯಾದ್ಯಂತ 5 ರಿಂದ 17 ವರ್ಷ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸಲು ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಉಚಿತವಾಗಿ ಅವಕಾಶ ಕಲ್ಪಿಸಲಾಗಿದೆ.

ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೆಪ್ಟೆಂಬರ್ 30 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಮಕ್ಕಳ ಆಧಾರ್ ಕಾರ್ಡ್ ನಲ್ಲಿ ಬಯೋಮೆಟ್ರಿಕ್ ಮಾಹಿತಿಯನ್ನು ನವೀಕರಿಸುವುದರಿಂದ ಶಾಲಾ ದಾಖಲಾತಿ,  ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರಿ ವಿವಿಧ ಯೋಜನೆಗಳು, ವಿದ್ಯಾರ್ಥಿ ವೇತನ ಸೇರಿದಂತೆ ಶೈಕ್ಷಣಿಕ ಸವಲತ್ತುಗಳ ಲಾಭ ಪಡೆಯಲು ಅಪ್ಡೇಟ್ ಮಾಡುವುದು ಅತ್ಯಗತ್ಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಗಾಗಿ ಪೋಷಕರು ಕೂಡಲೇ ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ಮಕ್ಕಳಿಗೆ ಸರಿಯಾದ ಸಮಯಕ್ಕೆ ತಲುಪುವಂತೆ ಮಾಡಲು ಪೋಷಕರು ಈ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular