HomeKarnatakaಶಾಲಾ ಮಕ್ಕಳ ಬ್ಯಾಗ್ ನಲ್ಲಿ ಕಾಂಡೊಮ್, ಗರ್ಭ ನಿರೋಧಕ ಪತ್ತೆ ಹಿನ್ನಲೆ: ಮಹತ್ವದ ಕ್ರಮ; ಪೋಸ್ಟರ್...

ಶಾಲಾ ಮಕ್ಕಳ ಬ್ಯಾಗ್ ನಲ್ಲಿ ಕಾಂಡೊಮ್, ಗರ್ಭ ನಿರೋಧಕ ಪತ್ತೆ ಹಿನ್ನಲೆ: ಮಹತ್ವದ ಕ್ರಮ; ಪೋಸ್ಟರ್ ಅಳವಡಿಕೆ, ಮಾರಾಟ ಮಾಡದಂತೆ ಸೂಚನೆ

ಬೆಂಗಳೂರು: ಅಪ್ರಾಪ್ತ ಮಕ್ಕಳಿಗೆ ಕಾಂಡೊಮ್ ಮತ್ತು ಗರ್ಭ ನಿರೋಧಕ ಮಾತ್ರೆ ಬಗ್ಗೆ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಔಷಧ ನಿಯಂತ್ರಣ ಇಲಾಖೆಯಿಂದ ಜಿಲ್ಲಾಮಟ್ಟದ ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಅಂಗಡಿಗಳ ಎದುರಲ್ಲಿ ಅಪ್ರಾಪ್ತ ಮಕ್ಕಳಿಗೆ ಕಾಂಡೊಮ್ ಮತ್ತು ಗರ್ಭ ನಿರೋಧಕ ಮಾತ್ರೆಗಳನ್ನು ಮಾರಾಟ ಮಾಡುವುದಿಲ್ಲ. ಇಂತಹ ಔಷಧಿ ಉಪಯೋಗಿಸಬಾರದು ಎಂದು ಪೋಸ್ಟರ್ ಹಾಕಲು ಕ್ರಮ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚೆಗೆ ಶಾಲಾ ಮಕ್ಕಳ ಬ್ಯಾಗ್ ಗಳಲ್ಲಿ ಕಾಂಡೊಮ್ ಮತ್ತು ಗರ್ಭ ನಿರೋಧಕ ಮಾತ್ರೆ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಅಗತ್ಯ ಕ್ರಮ ಕೈಗೊಳ್ಳಲು ಔಷಧ ನಿಯಂತ್ರಣ ಇಲಾಖೆಗೆ ತಿಳಿಸಿದ್ದು, ಈ ಹಿನ್ನಲೆಯಲ್ಲಿ ಸುತ್ತೋಲೆ ಹೊರಡಿಸಲಾಗಿದೆ.

ಪೋಸ್ಟರ್ ಗಳನ್ನು ಪ್ರದರ್ಶಿಸಿ ಮಕ್ಕಳಿಗೆ ತಿಳಿವಳಿಕೆ ನೀಡಬೇಕು. ಇಂತಹ ವಸ್ತುಗಳನ್ನು ಔಷಧ ಅಂಗಡಿಗಳಲ್ಲಿ ಮಕ್ಕಳಿಗೆ ಮಾರಾಟ ಮಾಡುವುದು ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಬೇಕು. ಕಾಂಡೊಮ್ ಮತ್ತು ಗರ್ಭ ನಿರೋಧಕ ಮಾತ್ರೆಗಳ ಮಾರಾಟ ಬ್ಯಾನ್ ಮಾಡಿಲ್ಲ. ಅವುಗಳನ್ನು ಅಪ್ರಾಪ್ತರು ಬಳಸಬಾರದು ಎಂದು ಜಾಗೃತಿ ಮೂಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular