ಬಳ್ಳಾರಿ: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಮೈಲಾಪುರದಲ್ಲಿ ನಡೆದಿದೆ.
ಬಲಕುಂದಿ ಗ್ರಾಮದ ಮಹಾಂಕಾಳಿ (12) ಹಾಗೂ ಶಿವರಾಜ್ (9) ಮೃತ ಬಾಲಕರು. ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಯುತ್ತಿತ್ತು. ಈ ವೇಳೆ ಕೃಷೀ ಹೊಂದದ ಬಳಿ ಹೋಗಿದ್ದ ಇಬ್ಬರು ಮಕ್ಕಳು ಕೃಷೀ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾರೆ.
ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ತಹಶಿಲ್ದಾರ್ ಭೇಟಿ ನೀಡಿ ಕುಟುಂಬದವರಿಂದ ಮಾಹಿತಿ ಪಡೆದುಕೊಂಡರು.