HomeLatest Newsಧಾರವಾಡದಲ್ಲಿ ಅಪಹರಣಕ್ಕೊಳಗಾಗಿದ್ದ ಮಕ್ಕಳು ಪಾರು

ಧಾರವಾಡದಲ್ಲಿ ಅಪಹರಣಕ್ಕೊಳಗಾಗಿದ್ದ ಮಕ್ಕಳು ಪಾರು

ಧಾರವಾಡ: ಧಾರವಾಡದಲ್ಲಿ ಅಪಹರಣಕ್ಕೊಳಗಾಗಿದ್ದ ಇಬ್ಬರೂ ಮಕ್ಕಳು ಪಾರಾಗಿದ್ದಾರೆ. ಜೊಯಿಡಾ ದಾಂಡೇಲಿ ಪೊಲೀಸರ ಸುಪರ್ದಿಯಲ್ಲಿ ಮಕ್ಕಳಿದ್ದಾರೆ.

ಧಾರವಾಡ ನಗರದ ಕಮಲಾಪುರದ ಸರ್ಕಾರಿ ಪ್ರಾಥಮಿಕ ಶಾಲೆಯ ಇಬ್ಬರು ಮಕ್ಕಳನ್ನು ಸೋಮವಾರ ಮಧ್ಯಾಹ್ನ ಅಪಹರಿಸಲಾಗಿದ್ದು, ಉತ್ತರ ಕನ್ನಡ ಜಿಲ್ಲೆ ಜೊಯಿಡಾ ಸಮೀಪ ಅಪಹರಣಕಾರನ ಬೈಕ್ ಅಪಘಾತಕ್ಕೀಡಾಗಿದೆ. ಇದರಿಂದ ಮಕ್ಕಳು ಪಾರಾಗಿದ್ದಾರೆ.

ಶಾಲೆಯಲ್ಲಿ ಊಟದ ಬಿಡುವಿನ ವೇಳೆಯಲ್ಲಿ ಬಂದಿದ್ದ ವ್ಯಕ್ತಿ ಮೂರನೇ ತರಗತಿಯ ವಿದ್ಯಾರ್ಥಿಗಳಾದ ಲಕ್ಷ್ಮಿ ಕರಿಯಪ್ಪನವರ ಮತ್ತು ತನ್ವೀರ್ ದೊಡ್ಡಮನಿ ಅವರನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದ. ಜೊಯಿಡಾ ಬಳಿ ಅಪಘಾತ ಸಂಭವಿಸಿದ್ದರಿಂದ ಅಪಹರಣಕಾರನ ತಲೆಗೆ ಪೆಟ್ಟಾಗಿದೆ. ಮಕ್ಕಳಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯರು ವಿಚಾರಿಸಿದಾಗ ಮಕ್ಕಳು ವಿಷಯ ತಿಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮಕ್ಕಳನ್ನು ಪೋಷಕರಿಗೆ ಒಪ್ಪಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular