HomeKarnatakaSHOCKING: ಪೋಷಕರೇ ಗಮನಿಸಿ: ಮನೆ ಬಳಿ ಆಟವಾಡುತ್ತಿದ್ದ ಮೂವರು ಹೆಣ್ಣುಮಕ್ಕಳು ನಾಪತ್ತೆ

SHOCKING: ಪೋಷಕರೇ ಗಮನಿಸಿ: ಮನೆ ಬಳಿ ಆಟವಾಡುತ್ತಿದ್ದ ಮೂವರು ಹೆಣ್ಣುಮಕ್ಕಳು ನಾಪತ್ತೆ

ಬೆಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ಮೂವರು ಹೆಣ್ಣು ಮಕ್ಕಳು ನಾಪತ್ತೆಯಾದ ಘಟನೆ ಬೆಂಗಳೂರಿನ ಮರಿಯಪ್ಪನ ಪಾಳ್ಯದಲ್ಲಿ ನಡೆದಿದೆ.

ಸಂಜೆ 4:30 ರಿಂದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮರಿಯಪ್ಪನ ಪಾಳ್ಯದ ಮೂವರು ಹೆಣ್ಣು ಮಕ್ಕಳು ಕಾಣೆಯಾಗಿದ್ದಾರೆ. ಹರ್ಷಿತಾ(3), ನಿಶ್ವಿಕಾ(6), ರಶ್ಮಿಕಾ(10) ನಾಪತ್ತೆಯಾದ ಮಕ್ಕಳು ಎಂದು ಹೇಳಲಾಗಿದೆ.

ಮನೆಯಿಂದ ಹೊರಗೆ ಬಂದು ಆಟವಾಡುತ್ತಿದ್ದ ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ. ಮೂವರು ಮಕ್ಕಳ ಪೋಷಕರು ಎಷ್ಟೇ ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular