HomeKarnatakaಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ: ಪೋಷಕರಲ್ಲಿ ಆತಂಕ

ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ: ಪೋಷಕರಲ್ಲಿ ಆತಂಕ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದು ಪೋಷಕರಲ್ಲಿ ಆತಂಕ ಮೂಡಿದೆ.

ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದಾರೆ. ಮಂಜುಳಾ, ಮಧುಕುಮಾರ್, ಮಹಾಲಕ್ಷ್ಮಿ, ಭಾನು ನಾಪತ್ತೆಯಾದವರು. ಗ್ರಾಮದಿಂದ ನಾಪತ್ತೆಯಾಗಿರುವ ಎಲ್ಲಾ ಮಕ್ಕಳು 15 ವರ್ಷದೊಳಗಿನವರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶನಿವಾರ ಮಧ್ಯಾಹ್ನ ಮನೆಯಿಂದ ಹೊರ ಹೋದವರು ವಾಪಸ್ ಬಂದಿಲ್ಲ. ಎಲ್ಲಾ ಕಡೆ ಹುಡುಕಿದರೂ ಸಿಗದ ಕಾರಣ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೋಷಕರು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಕ್ಕಳ ಪತ್ತೆಗೆ ಕ್ರಮಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular