ಬೆಂಗಳೂರು : ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು, ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 2024-25 ಸಾಲಿಗೆ ಪ್ರೋತ್ಸಾಹಧನ ನೀಡಲು ಮುಂದಾಗಿದೆ. ಈ ಮೂಲಕ ಧಾರ್ಮಿಕ ಸೇವೆಯಲ್ಲಿರುವವರ ಕುಟುಂಬಕ್ಕೆ ಶಕ್ತಿ ತುಂಬುವ, ಅವರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಬೆನ್ನೆಲುಬಾಗುವ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಪಿಯುಸಿ, ಐಟಿಐ / ಜೆ.ಒ.ಸಿ/ಡಿಪ್ಲೋಮಾ ಓದುವವರಿಗೆ ರೂ . 5,000/-
ಪದವಿ ಶಿಕ್ಷಣ ಪಡೆಯುತ್ತಿರುವವರಿಗೆ ರೂ. 7,000/-
ಸ್ನಾತಕೋತ್ತರ ಪದವಿ ಪಡೆಯುತ್ತಿರುವವರಿಗೆ ರೂ. 15,000/- ಭತ್ಯೆ ನೀಡಲಾಗುತ್ತದೆ.
ಇದೇ ರೀತಿಯಾಗಿ, ಆಯುರ್ವೇದಿಕ್, ಹೋಮಿಯೋಪತಿ ಮತ್ತು ಯುನಾನಿಯಂತಹ ಇತರೆ ವೈದ್ಯಕೀಯ ಕೋರ್ಸ್ಗಳಿಗೆ ಹಾಗೂ ತಾಂತ್ರಿಕ ಶಿಕ್ಷಣ (ಇಂಜಿನಿಯರಿಂಗ್) ಓದುತ್ತಿರುವವರಿಗೆ ರೂ. 25,000/- ಸಹಾಯಧನ ದೊರೆಯಲಿದೆ.ಹಾಗೆಯೇ, ವೈದ್ಯಕೀಯ/ ಡೆಂಟಲ್ ಶಿಕ್ಷಣ ಓದುವವರಿಗೆ 50,000/- ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ 1,00,000/- ರೂ ಮೊತ್ತದ ಪ್ರೋತ್ಸಾಹ ಧನ ಕೊಡಲಾಗುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.
ಅರ್ಹರು ಧಾರ್ಮಿಕ ದತ್ತಿ ಆಯುಕ್ತರ ಕಚೇರಿ/ಸಂಬಂಧಪಟ್ಟ ಜಿಲ್ಲಾಧಿಕಾರಿ ಅಥವಾ ತಾಲೂಕು ತಹಶಿಲ್ದಾರ್ ಕಚೇರಿಯಲ್ಲಿ ಅರ್ಜಿ ನಮೂನೆಗಳನ್ನು ಪಡೆದು ದೃಢೀಕೃತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ಧಾರ್ಮಿಕ ದತ್ತಿ ಇಲಾಖೆಯ ವೆಬ್ಸೈಟ್ಗೆ ಭೇಟಿ ನೀಡಿ ಮಾಹಿತಿ ಪಡೆಯಿರಿ.
ನಾಡಿನ ಅರ್ಚಕರು, ನೌಕರರ ಮಕ್ಕಳು, ಯುವಜನರು ಈ ಯೋಜನೆಯ ಸೌಲಭ್ಯವನ್ನು ಸದುಪಯೋಗ ಮಾಡಿಕೊಂಡು ಉನ್ನತ ಶಿಕ್ಷಣ ಪಡೆದು ಶೈಕ್ಷಣಿಕ ಪ್ರಗತಿ ಸಾಧಿಸಿ ತಮ್ಮ ಕುಟುಂಬಕ್ಕೆ ಮತ್ತು ಸಮಾಜಕ್ಕೆ ಕೀರ್ತಿ ತರುವಂತೆ ಆಶಿಸುತ್ತೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
