ಬೆಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಬಳಿ ನಡೆದಿದೆ.
ಬಳ್ಳೂರು ಗ್ರಾಮದ ಕೆರೆಯಲ್ಲಿ ಈ ದುರಂತ ಸಂಭವಿಸಿದೆ. ಬಿಹಾರ ಮೂಲದ ಅನಿಕೇತ್ ಕುಮಾರ್ ಹಾಗೂ ಆಂಧ್ರದ ಕದ್ರಿ ಮೂಲದ ರೆಹಮತ್ ಮೃತ ಮಕ್ಕಳು. ಮನೆ ಬಳಿ ಆಡುತ್ತಿದ್ದ ಮಕ್ಕಳು ಕೆರೆಗೆ ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಕೆರೆಯಲ್ಲಿ ಮಕ್ಕಳ ಶವ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಪೋಷಕರಿಗೆ ತಿಳಿಸಿದ್ದಾರೆ. ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
