ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿ ತನ್ನ ಇಬ್ಬರು ಮಕ್ಕಳನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಮತ್ತಿಕೆರೆ ವ್ಯಾಪ್ತಿಯಲ್ಲಿ ನಡೆದಿದೆ.
4 ವರ್ಷದ ನಿವೇದ್ ಹಾಗೂ 2 ವರ್ಷದ ನಿರ್ಮಲ್ ತಾಯಿ ಕೈಯಿಂದಲೇ ಕೊಲೆಯಾದ ಮಕ್ಕಳು. ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ ಪವಿತ್ರಾ ಅವರ ಸ್ಥಿತಿಯೂ ಗಂಭೀರವಾಗಿದೆ. ಪವಿತ್ರಾ ಹಾಗೂ ಪತಿ ಪ್ರಶಾಂತ್ ನಡುವೆ ಗಲಾಟೆಯಾಗಿತ್ತು. ಇದರಿಂದ ಬೇಸತ್ತ ಪವಿತ್ರಾ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ.
ಮಕ್ಕಳಿಬ್ಬರಿಗೂ ವಿಷ ಹಾಕಿ ಕೊಲೆಗೈದಿದ್ದು, ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತೀವ್ರ ಅಸ್ವಸ್ಥಳಾಗಿರುವ ಪವಿತ್ರಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

