HomeKarnatakaBIG NEWS: ಮೆಣಸಿನಕಾಯಿ ಸಾಗಿಸುತ್ತಿದ್ದ ಲಾರಿಗೆ ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶ; ಲಕ್ಷಾಂತರ ರೂಪಾಯಿ ಮೆಣಸು...

BIG NEWS: ಮೆಣಸಿನಕಾಯಿ ಸಾಗಿಸುತ್ತಿದ್ದ ಲಾರಿಗೆ ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶ; ಲಕ್ಷಾಂತರ ರೂಪಾಯಿ ಮೆಣಸು ಸುಟ್ಟು ಭಸ್ಮ

ರಾಯಚೂರು: ಲಾರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಲಾರಿ ಸಮೇತ ಅಪಾರ ಪ್ರಮಾಣ ಮೆಣಸಿನ ಕಾಯಿ ಸುಟ್ಟು ಭಸ್ಮವಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ದೇವದುರ್ಗ ತಾಲೂಕಿನ ದೇವರಗುಡ್ಡ ಗ್ರಾಮದ ಸಮೀಪ ಈ ಘಟನೆ ನಡೆದಿದೆ. ಲಾರಿಯಲ್ಲಿ ಮೆಣಸಿನಕಾಯಿ ತುಂಬಿಕೊಂಡು ಮಾರ್ಕೆಟ್ ಗೆ ಸಾಗಿಸಲಾಗುತ್ತಿತ್ತು. ಮಾರ್ಗ ಮಧ್ಯೆ ಹೈವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಲಾರಿ ಹೊತ್ತಿ ಉರಿದಿದೆ. ಲಾರಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೆಣಸಿನ ಕಾಯಿ ಸುಟ್ಟು ಭಸ್ಮವಾಗಿದೆ.

ಸ್ಥಳಕ್ಕಾಗಿಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಸಂಪೂರ್ಣವಾಗಿ ಸುಟ್ಟು ಬಸ್ಮವಾಗಿರುವ ಮೆಣಸಿನಕಾಯಿ ಕಂಡು ರೈತ ಕಣ್ಣೀರಿಟ್ಟಿದ್ದಾನೆ. ಮೊದಲೇ ಬರಗಾಲ. ಕಷ್ಟಪಟ್ಟು ಬೆಳೆದಿದ್ದ ಮೆಣಸಿನಕಾಯಿ ಬೆಳೆಯನ್ನು ಇನ್ನೇನು ಮಾರುಕಟ್ಟೆಗೆ ಸಾಗಿಸುವಷ್ಟರಲ್ಲಿ ದಾರಿ ಮಧ್ಯೆಯೇ ಬೆಂಕಿಗಾಹುತಿಯಾಗಿದ್ದು, ಮೆಣಸಿನಕಾಯಿ ಸಂಪೂರ್ಣ ನಾಶವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular