HomeLatest Newsಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ ಅಧಿಕಾರಿಗಳ ಅಮಾನತು ಖುಲಾಸೆ: ಸಾವಿಗೆ ಯಾರೋ ಒಬ್ಬರನ್ನು ಹೊಣೆಯಾಗಿಸಲು ಆಗಲ್ಲ; ಪರಮೇಶ್ವರ್

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ ಅಧಿಕಾರಿಗಳ ಅಮಾನತು ಖುಲಾಸೆ: ಸಾವಿಗೆ ಯಾರೋ ಒಬ್ಬರನ್ನು ಹೊಣೆಯಾಗಿಸಲು ಆಗಲ್ಲ; ಪರಮೇಶ್ವರ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ವಿಚಾರಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ನಡೆದಿದೆ ಎಂಬ ಕಾರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಮೊದಲು ಅಮಾನತು ಮಾಡಲಾಗಿತ್ತು. ಬಳಿಕ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ, ವರದಿ ಆಧಾರದ ಮೇಲೆ ಅವರನ್ನು ಖುಲಾಸೆ ಮಾಡಲಾಗಿದೆ. ಸಾವಿಗೆ ಯಾರೋ ಒಬ್ಬರನ್ನು ಹೊಣೆಯಾಗಿಸಲು ಆಗುವುದಿಲ್ಲ ಎಂದರು.

ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಗೆ ತೆರಳಲಿದ್ದೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳನ್ನು ಕರೆದರೆ ಅವರು ದೆಹಲಿಗೆ ಹೋಗುತ್ತಾರೆ. ನನ್ನನ್ನು ಕರೆದರೆ ನಾನು ಹೋಗುತ್ತೇನೆ. ಆಹ್ವಾನವಿಲ್ಲದೆ ಯಾರೂ ದೆಹಲಿಗೆ ಹೋಗುವುದಿಲ್ಲ ಎಂದು ಪ್ರತಿಕ್ರಿಯಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಡದಿ ಟೌನ್‌ಶಿಪ್‌ ಯೋಜನೆ ಕುರಿತು ಮುಖ್ಯಮಂತ್ರಿಗಳು ಎರಡು ತಿಂಗಳೊಳಗೆ ಸಮಿತಿ ರಚಿಸಿ ವರದಿ ಪಡೆದು ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ಈ ಮಧ್ಯೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಮಧ್ಯಪ್ರವೇಶಿಸಿರುವುದು ಸರ್ಕಾರಕ್ಕೆ ಹಿನ್ನಡೆಯಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಇದು ರೈತರು ಮತ್ತು ಸರ್ಕಾರದ ನಡುವಿನ ವಿಷಯ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವುದು ಸರಿಯಲ್ಲ. ಅಭಿವೃದ್ಧಿಯ ದೃಷ್ಟಿಯಿಂದ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳನ್ನು ನಾವು ಸಮರ್ಥಿಸಿಕೊಳ್ಳುತ್ತೇವೆ. ಮುಖ್ಯಮಂತ್ರಿಗಳು ಈಗಾಗಲೇ ಬಿಡದಿಯಲ್ಲಿ ಟೌನ್‌ಶಿಪ್‌ ಅಭಿವೃದ್ಧಿಪಡಿಸುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಕುರಿತು ಹಲವು ಚರ್ಚೆಗಳು ನಡೆದಿದ್ದವು. ಕುಮಾರಸ್ವಾಮಿ ಅವರ ಅವಧಿಯಲ್ಲಿಯೂ ಈ ವಿಷಯ ಚರ್ಚೆಗೆ ಬಂದಿತ್ತು. ಹೀಗಾಗಿ ಇದಕ್ಕೆ ಹೊಸದಾಗಿ ರಾಜಕೀಯ ಬಣ್ಣ ಬಳಿಯುವುದು ಸೂಕ್ತವಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular