HomeLatest NewsBREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭೀಕರ ಕಾಲ್ತುಳಿತ: 8 ಜನ RCB ಅಭಿಮಾನಿಗಳು ಸಾವು; ಕ್ಷಣ ಕ್ಷಣಕ್ಕೂ...

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭೀಕರ ಕಾಲ್ತುಳಿತ: 8 ಜನ RCB ಅಭಿಮಾನಿಗಳು ಸಾವು; ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಕಾಲ್ತುಳಿದಲ್ಲಿ ಒಟ್ಟು 8 ಜನರು ಮೃತಪಟ್ಟಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ.

18 ವರ್ಷಗಳ ಬಳಿಕ ಆರ್ ಸಿಬಿ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಮ್ಮ ನೆಚ್ಚಿನ ಆಟಗಾರರ ಸಂಭ್ರಮಾಚರಣೆ ನೋಡಲೆಂದು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜನಸಾಗರವೇ ಹರಿದುಬಂದಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಪ್ರವಾಹದಂತೆ ಸ್ಟೇಡಿಯಂನತ್ತ ನುಗ್ಗಿದ ಆರ್ ಸಿಬಿ ಅಭಿಮಾನಿಗಳು ಗೇಟ್ ಗಳನ್ನು ಮುರಿದು ಒಳನುಗ್ಗುತ್ತಿದ್ದಂತೆ ಭಾರಿ ನೂಕುನುಗ್ಗಲು ಉಂಟಾಗಿದೆ. ಭೀಕರ ಕಾಲ್ತುತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದುರಂತದಲ್ಲಿ ಈವರೆಗೆ 8 ಜನರು ಸಾವನ್ನಪ್ಪಿದ್ದಾರೆ. ಐವರು ವೈದೇಹಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರೆ, ಮೂವರು ಗಾಯಾಳುಗಳು ಬೌರಿಂಗ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನೂ 15ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular