HomeLatest NewsBREAKING NEWS: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರಿ ನೂಕುನುಗ್ಗಲು: ಇಬ್ಬರು RCB ಅಭಿಮಾನಿಗಳು ಸಾವು!

BREAKING NEWS: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರಿ ನೂಕುನುಗ್ಗಲು: ಇಬ್ಬರು RCB ಅಭಿಮಾನಿಗಳು ಸಾವು!

ಬೆಂಗಳೂರು: ಆರ್ ಸಿಬಿ ತಂಡ ಐಪಿಎಲ್ ಕಪ್ ಗೆದ್ದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದ ಇಬ್ಬರು ಅಭಿಮಾನಿಗಳು ಸಾವನ್ನಪ್ಪಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂಬಳಿ ಜನಸಾಗರವೇ ನೆರೆದಿದ್ದು, ಅಭಿಮಾನಿಗಳು ಬ್ಯಾರಿಕೇಡ್ ಗಳನ್ನು ತಳ್ಳಿ, ಗೇಟ್ ಗಳನ್ನು ಮುರಿದು ಪ್ರವಾಹದಂತೆ ಸ್ಟೇಡಿಯಂ ಒಳನುಗ್ಗಿದ್ದಾರೆ. ಈ ವೇಳೆ ಸ್ಥಳದಲ್ಲಿ ಭಾರಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೂಕುನುಗ್ಗಲು, ಕಾಲ್ತುಳಿದತದಲ್ಲಿ 15 ಜನರು ಗಾಯಗೊಂಡು ಅಸ್ವಸ್ಥರಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದರೂ ಬಗ್ಗದ ಜನರು ಸ್ಟೇಡಿಯಂನತ್ತ ನುಗ್ಗುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular