HomeLatest NewsBREAKING NEWS: ಕಾಲ್ತುಳಿತ ದುರಂತ: ಘಟನೆ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

BREAKING NEWS: ಕಾಲ್ತುಳಿತ ದುರಂತ: ಘಟನೆ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಆರ್ ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಹಾಗೂ ಹಲವರು ಗಾಯಗೊಂಡಿರುವ ದುರಂತದ ಬೆನ್ನಲ್ಲೇ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ. ಇದೇ ವೇಳೆ ಹೈಕೋರ್ಟ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪವಾಗಿದೆ, ಹಲವರ ಸಾವು-ನೋವು ಸಂಭವಿಸಿದೆ. ಘಟನೆ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಇಂದು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಿಗದಿಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular