HomeLatest NewsBREAKING: ಕಾಲ್ತುಳಿತ ದುರಂತ: KSCAಯ ಮೂವರು ಅರ್ಜಿದಾರರಿಗೆ ಹೈಕೋರ್ಟ್ ಬಿಗ್ ರಿಲೀಫ್!

BREAKING: ಕಾಲ್ತುಳಿತ ದುರಂತ: KSCAಯ ಮೂವರು ಅರ್ಜಿದಾರರಿಗೆ ಹೈಕೋರ್ಟ್ ಬಿಗ್ ರಿಲೀಫ್!

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಆರ್ ಸಿಬಿ ಅಭಿಮಾನಿಗಳು ಸಾವು ಪ್ರಕರಣ ಸಂಬಂಧ ಬಂಧನ ಭೀತಿಯಲ್ಲಿದ್ದ ಕೆ ಎಸ್ ಸಿಎ ಆಡಳಿತ ಮಂಡಳಿಯ ಮೂವರು ಮೂವರು ಪದಾಧಿಕಾರಿಗಳಿಗೆ ಹೈಕೋರ್ಟ್ ಬಿಗ್ ರಿಫೀಲ್ ನೀಡಿದೆ.

ಕೆಎಸ್ ಸಿಎಯ ಅಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಪೀಠ ಮಧ್ಯಂತರ ಆದೇಶ ನೀಡಿದೆ. ಇದರಿಂದ ಕೆಎಸ್ ಸಿಎ ಆಡಳಿತ ಮಂಡಳಿಯ ಮೂವರು ಅರ್ಜಿ ದಾರರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಕೆಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಶಂಕರ್ ಹಾಗೂ ಖಜಾಂಚಿ ಜೈರಾಮ್ ಅವರ ವಿರುದ್ಧ ವಲವಂತದ ಕ್ರಮ ಕೈಗೊಳ್ಳುವಂತಿಲ್ಲ. ಆದರೆ ಅರ್ಜಿದಾರರು ವಿಚಾರಣೆಗೆ ಸಹಕರಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕೆ ಎಸ್ ಸಿಎ ಪದಾಧಿಕಾರಿಗಳು ಬಂಧನ ಭೀತಿಯಲ್ಲಿದ್ದರು. ಈ ನಿಟ್ಟಿನಲ್ಲಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿ ತಮ್ಮ ವಿರುದ್ಧದ ಎಫ್ ಐ ಆರ್ ರದ್ದು ಮಾಡುವಂತೆ ಮನವಿ ಮಾಡಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular