HomeLatest NewsBIG NEWS: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

BIG NEWS: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

ಬೆಂಗಳೂರು: ಆರ್ ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ಶಿಫ್ಟ್ ಮಾಡಲಾಗಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ಬೇರೆಡೆ ಶಿಫ್ಟ್ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ನಡೆಯಬೇಕಿದ್ದ ಭಾರತ ‘ಎ’ ಮತ್ತು ಸೌತ್ ಆಫಿಕಾ ‘ಎ’ ನಡುವಿನ ಸರಣಿಗಳನ್ನು ಸ್ಥಳಾಂತರಿಸಲಾಗಿದೆ. ಯಾವುದೇ ಕಾರಣ ನೀಡದೇ ಪ್ರಕಟಣೆ ಹೊರಡಿಸಿರುವ ಬಿಸಿಸಿಐ, ಬೆಂಗಳೂರಿನ ಪಂದ್ಯಗಳನ್ನು ರಾಜ್ ಕೋಟ್ ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ.

ನವೆಂಬರ್ 13ರಿಂದ 19ರವರೆಗೆ ನಡೆಯಲಿರುವ ಭಾರತ ‘ಎ’ ಹಾಗೂ ಸೌತ್ ಆಫ್ರಿಕಾ ‘ಎ’ ನಡುವಿನ ಪಂದ್ಯಗಳನ್ನು ರಾಜ್ ಕೋಟ್ ನಲ್ಲಿ ಆಯೀಜಿಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular