BIG NEWS: ಕಾಲ್ತುಳಿತ ದುರಂತ: 25ಕ್ಕೂ ಹೆಚ್ಚು ಗಾಯಾಳುಗಳಿಗೆ ನೋಟಿಸ್

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೆಡಿಯಂನಲ್ಲಿ ಸಂಭವಿಸಿದ್ದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ.

ಬೆಂಗಳೂರಿನ ಬೌರಿಂಗ್, ಮಣಿಪಾಲ್, ವೈದೇಹಿ, ಪೋರ್ಟೀಸ್ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಹಿತಿ ಪಡೆದಿರುವ ಜಿಲ್ಲಾಧಿಕಾರಿ ಜಗದೀಶ್, 25ಕ್ಕೂ ಹೆಚ್ಚು ಗಾಯಾಳುಗಳಿಗೆ ನೋಟಿಸ್ ನೀಡಿದ್ದಾರೆ. ಜೂನ್ 11 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.

ಈವರೆಗೆ 65 ಗಾಯಾಳುಗಳು ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಡಿಸ್ಚಾರ್ಜ್ ಆಗಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಕಾರಣವೇನು? ಯಾವ ರೀತಿ ಸಮಸ್ಯೆಯಾಯಿತು? ಎಂಬ ಬಗ್ಗೆ ಈಗಾಗಲೇ ಮಾಹಿತಿ ಪಡೆಯಲಾಗಿದೆ. 15 ದಿನಗಳ ಒಳಗಾಗಿ ತನಿಖಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಂಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read