HomeLatest NewsBIG NEWS: ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ, ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ

BIG NEWS: ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ, ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸಿಎಂ, ಡಿಸಿಎಂ ಹಾಗೂ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಆರ್ ಸಿಬಿ ವಿಜಯೋತ್ಸವ ಕಣ್ತುಂಬಿಕೊಳ್ಳಲು ಹೋಗಿದ್ದ 11 ಜನರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಘಟನೆ ಬಗ್ಗೆ ಈವರೆಗೆ ಒಂದೇ ಒಂದು ಪ್ರಕರಣ ದಾಖಲಾಗಿಲ್ಲ. ಇದರ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕೆ ಎ ಎಸ್ ಅಧಿಕಾರಿಗಳ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜಕೀಯ ಪ್ರಚಾರದ ಲಾಭದ ಕಾರಣಕ್ಕಾಗಿ ಆರ್ ಸಿಬಿ ತಂಡದ ಆಟಗಾರರನ್ನು ವಿಧಾನಸೌಧದ ಮುಂಭಾಗ ಸನ್ಮಾನ್ನಿಸುವ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಆಚರಿಸುವ ದುಡುಕಿನ ನಿರ್ಧಾರ ಕೈಗೊಂಡು, ಸೂಕ್ತ ಭದ್ರತೆ ನಿರ್ಲಕ್ಷ ಮಾಡಿ, ಸುಮಾರು 11 ಜನರ ಸಾವು ಸಂಭವಿಸಿದೆ. ೩೦ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ದುರಂತಕ್ಕೆ ಕಾರಣರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ ಪದಾಧಿಕಾರಿಗಳು ಹಾಗೂ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 106 ಅಡಿ ಮೊಕದ್ದಮೆ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular