HomeLatest NewsBREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ 11 ಜನರು ಬಲಿ ಪ್ರಕರಣ: ಮೃತರ ಕುಟುಂಬಕ್ಕೆ ಒಟ್ಟು...

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ 11 ಜನರು ಬಲಿ ಪ್ರಕರಣ: ಮೃತರ ಕುಟುಂಬಕ್ಕೆ ಒಟ್ಟು ತಲಾ 25 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನಸ್ವಾಮಿ ಸ್ಟೆಡಿಯಂ ನಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ಒಟ್ಟು ತಲಾ 25 ಲಕ್ಷ ಪರಿಹಾರ ಘೋಷಣೆಯಾಗಿದೆ.

18 ವರ್ಷಗಳ ಬಳಿಕ ಐಎಲ್ ಟ್ರೋಫಿ ಗೆದ್ದ ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲೆಂದು ಚಿನ್ನಸ್ವಾಮಿ ಸ್ಟೆಡಿಯಂಗೆ ಬಂದಿದ್ದ ಅಭಿಮಾನಿಗಳಲ್ಲಿ 11 ಜನರು ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಜಯೋತ್ಸವಕ್ಕೆಂದು ಬಂದವರು ಸಾವಿನ ಮನೆ ಸೇರಿದ್ದು, ಕುಟುಂಬಗಳು ಶೋಕಸಾಗರದಲ್ಲಿ ಮುಳುಗಿವೆ. ಸರ್ಕಾರ, ಆರ್ ಸಿಬಿ, ಕೆ ಎಸ್ ಸಿಎ ಯಾರೇ ಆಗಲಿ ಎಷ್ಟೇ ಪರಿಹಾರ ನೀಡಿದರೂ ಹೋದ ಜೀವ ಮತ್ತೆ ವಾಪಸ್ ಆಗಲು ಸಾಧ್ಯವಿಲ್ಲ. ಮಕ್ಕಳು, ಮನೆಮಂದಿಯನ್ನು ಕಳೆದುಕೊಂಡ ಕುಟುಂಬಕ್ಕೆ ಮತ್ತೆ ಅವರನ್ನು ಹಿಂತಿರುಗಿಸಲು ಸಾಧ್ಯವಿಲ್ಲ. ಆದಾಗ್ಯೂ ಸರ್ಕಾರ ಹಾಗೂ ಆರ್ ಸಿಬಿ ಹಾಗೂ ಎಸ್ ಸಿಎ ವತಿಯಿಂದ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸುವ ಕೆಲಸವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲು ಮುಂದಾಗಿದೆ.

ಇದೇ ವೇಳೆ ಆರ್ ಸಿಬಿ ಮ್ಯಾನೇಜ್ಮೆಂಟ್ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ 10 ಲಕ್ಷ ರೂಪಯೈ ಪರಿಹಾರ ಘೋಷಿಸಿದೆ. ಗಾಯಾಳು ಅಭಿಮಾನಿಗಳ ಚಿಕಿತ್ಸೆಗಾಗಿ ಆರ್ ಸಿಬಿ ಕೇರ್ ನಿಧಿ ರಚಿಸಿದೆ.

ಇನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕೂಡ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಒಟ್ಟು ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular