HomeLatest NewsBREAKING: ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ RCB

BREAKING: ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ RCB

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಘಟನೆ ಬಗ್ಗೆ ಆರ್ ಸಿಬಿ ಮ್ಯಾನೇಜ್ಮೆಂಟ್ ತೀವ್ರ ಸಂತಾಪ ಸೂಚಿಸಿದೆ. ದುರಂತ ಪ್ರಕರಣ ಆರ್ ಸುಬಿ ಕುಟುಂಬಕ್ಕೆ ನೋವುಂಟುಮಾಡಿದೆ. ಮೃತರ ಕುಟುಂಬದ ನೋವಿನ ಜೊತೆ ನಾವಿದ್ದೇವೆ ಎಂದು ತಿಳಿಸಿದೆ.

ಇದೇ ವೇಳೆ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಗಾಯಾಳು ಅಭಿಮಾನಿಗಳ ಚಿಕಿತ್ಸೆಗಾಗಿ ಆರ್ ಸಿಬಿ ಕೇರ್ ನಿಧಿ ರಚನೆ ಮಾಡಿದೆ.

ಇದೇ ವೇಳೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ-ಕೆ ಎಸ್ ಸಿಎ ಕೂಡ ಮೃತರ ಕುಟುಂಬಕ್ಕೆ ತಲಾ 5ಲಕ್ಷ ಪರಿಹಾರ ಘೋಷಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular