HomeLatest NewsBREAKING NEWS: ಕಾಲ್ತುಳಿತ ದುರಂತ: RCB ಮ್ಯಾನೇಜ್ಮೆಂಟ್ ವಿರುದ್ಧ FIR ದಾಖಲು

BREAKING NEWS: ಕಾಲ್ತುಳಿತ ದುರಂತ: RCB ಮ್ಯಾನೇಜ್ಮೆಂಟ್ ವಿರುದ್ಧ FIR ದಾಖಲು

ಬೆಂಗಳೂರು: ಆರ್ ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಅಭಿಮಾನಿಗಳು ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಕೊನೆಗೂ ಆರ್ ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕಾಲ್ತುಳಿತ ದುರಂತ ಸಂಭವಿಸಿ 24 ಗಂಟೆ ಬಳಿಕ ಇದೀಗ ಪ್ರಕರಣ ದಾಖಲಾಗಿದೆ.

ಎ1 ಆರ್ ಸಿಬಿ ಮ್ಯಾನೇಜ್ಮೆಂಟ್, ಎ2 ಡಿಎನ್ ಎ ಇವೆಂಟ್ ಮ್ಯಾನೇಜ್ಮೆಂಟ್, ಎ3 ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಎಂದು ಪ್ರಕರಣ ದಾಖಲಾಗಿದೆ. ಬಿಎನ್ ಎಸ್ ಸೆಕ್ಷನ್ 105, 115, 118 ಅಡಿ ಮೊಕದ್ದಮೆ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular