HomeKarnatakaBREAKING NEWS: ಚಿಂತಾಮಣಿಯಲ್ಲಿ ಭೀಕರ ಅಪಘಾತ: ಇಬ್ಬರು ಸಜೀವದಹನ

BREAKING NEWS: ಚಿಂತಾಮಣಿಯಲ್ಲಿ ಭೀಕರ ಅಪಘಾತ: ಇಬ್ಬರು ಸಜೀವದಹನ

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವದಹನಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.

ಚಿಂತಾಮಣಿಯ ಗೋಪಲ್ಲಿ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಸಜೀವದಹನವಾಗಿದ್ದಾರೆ. ಉಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular