HomeKarnatakaBREAKING : ಮಹಾಮಳೆಗೆ ಮತ್ತೊಂದು ಬಲಿ : ಚಿತ್ರದುರ್ಗದಲ್ಲಿ ಮನೆ ಗೋಡೆ ಕುಸಿದು ಬಿದ್ದು ವೃದ್ಧೆ...

BREAKING : ಮಹಾಮಳೆಗೆ ಮತ್ತೊಂದು ಬಲಿ : ಚಿತ್ರದುರ್ಗದಲ್ಲಿ ಮನೆ ಗೋಡೆ ಕುಸಿದು ಬಿದ್ದು ವೃದ್ಧೆ ಸಾವು..!

ಚಿತ್ರದುರ್ಗ: ನಿರಂತರವಾಗಿ ಸುರಿದ ಮಳೆಯಿಂದ ಮನೆ ಗೋಡೆ ಕುಸಿದು ಬಿದ್ದು ವೃದ್ಧೆಯೊಬ್ಬರು ಮನೆಯಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗದ ಇಚಲ ನಾಗೇನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಎರಡು ದಿನಗಳಿಂದ ಧಾರಾಕಾರವಾಗಿ ಸುರಿದ ಮಳೆಗೆ ಮನೆಗೋಡೆ ಕುಸಿದು ಬಿದ್ದಿದೆ. 75 ವರ್ಷದ ವೃದ್ಧೆ ರಂಗಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಣ್ಣಿನ ಅವಶೇಷಗಳಡಿ ಸಿಲುಕಿ ವೃದ್ಧೆ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular