HomeKarnatakaBREAKING NEWS: ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

BREAKING NEWS: ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂದಿನಿಂದ ಕಾರ್ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಘಟನೆ ನಡೆದಿದೆ.

ಲಾರಿ ಹಿಂಬದಿಗೆ ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಕಾರ್ ತೆರಳುತ್ತಿತ್ತು. ಅಪಘಾತದ ತೀವ್ರತೆಗೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular