HomeLatest Newsರಸ್ತೆ ಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ: ಹಿಟ್ & ರನ್ ಗೆ ಇಬ್ಬರು ಸ್ಥಳದಲ್ಲೇ...

ರಸ್ತೆ ಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ: ಹಿಟ್ & ರನ್ ಗೆ ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಅಪರಿಚಿತ ವಾಹನ ಡಿಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರೆಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬಲಿಯಾಗಿದ್ದಾರೆ. ರಸ್ತೆ ಬದಿ ನಿಂತಿದ್ದವರಿಗೆ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಅಪಘಾತದ ಬಳಿಕ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ.

ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರು ಕೆಟ್ಟಿದ್ದರಿಂದ ರಿಪೇರಿಗೆಂದು ರಸ್ತೆ ಬದಿ ನಾಲ್ವರು ನಿಂತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ಅಪಘಾತದ ಬಳಿಕ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular