HomeLatest NewsBREAKING : ಚಿತ್ರದುರ್ಗ ಬಸ್ ದುರಂತ : ಮತ್ತೋರ್ವ ಗಾಯಾಳು ಸಾವು, ಸಾವಿನ ಸಂಖ್ಯೆ 8...

BREAKING : ಚಿತ್ರದುರ್ಗ ಬಸ್ ದುರಂತ : ಮತ್ತೋರ್ವ ಗಾಯಾಳು ಸಾವು, ಸಾವಿನ ಸಂಖ್ಯೆ 8 ಕ್ಕೇರಿಕೆ.!

ಚಿತ್ರದುರ್ಗ : ಚಿತ್ರದುರ್ಗ ಬಸ್ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ 8 ಕ್ಕೇರಿಕೆಯಾಗಿದೆ.

ಮೃತರನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಚಿತ್ರದುರ್ಗದಲ್ಲಿ ನಡೆದ ಬಸ್ ಅಪಘಾತದಲ್ಲಿ ಶೇ.40 ರಷ್ಟು ಸುಟ್ಟು ಗಾಯಗೊಂಡಿದ್ದ ಮಂಜುನಾಥ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಬೆಂಕಿಯಲ್ಲಿ ಶ್ವಾಸಕೋಶ ಸುಟ್ಟು ಹೋಗಿದ್ದರಿಂದ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪದ ಗೊರ್ಲತ್ತು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಪ್ರಯಾಣಿಕರು ಸಜೀವವಾಗಿ ದಹನಗೊಂಡಿದ್ದರು. ಇದೀಗ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ 8 ಕ್ಕೇರಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಚಿತ್ರದುರ್ಗದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular