HomeKarnatakaBREAKING: ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ: ಅಪಘಾತದಲ್ಲಿ 20ಕ್ಕೂ ಅಧಿಕ ಪ್ರಯಾಣಿಕರಿಗೆ...

BREAKING: ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ: ಅಪಘಾತದಲ್ಲಿ 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಗ್ರಾಮದ ಬಳಿ ರಾಜಹಂಸ ಬಸ್ ಅಪಘಾತಕ್ಕೀಡಾಗಿದ್ದು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ ಆಗಿದೆ. ಚಿಕ್ಕಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಅಪಘಾತ ಸಂಭವಿಸಿದೆ. ಮದುವೆ ಮುಗಿಸಿಕೊಂಡು ಮಾಗಡಿಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular