HomeLatest Newsಚಿತ್ರದುರ್ಗ ಬಸ್ ದುರಂತ: ಡಿಎನ್ಎ ವರದಿ ಆಧರಿಸಿ ಮಾನಸ, ನವ್ಯಾ ಮೃತದೇಹ ಹಸ್ತಾಂತರ: ಇಂದೇ ಅಂತ್ಯಕ್ರಿಯೆ

ಚಿತ್ರದುರ್ಗ ಬಸ್ ದುರಂತ: ಡಿಎನ್ಎ ವರದಿ ಆಧರಿಸಿ ಮಾನಸ, ನವ್ಯಾ ಮೃತದೇಹ ಹಸ್ತಾಂತರ: ಇಂದೇ ಅಂತ್ಯಕ್ರಿಯೆ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡಹಳ್ಳಿಯ ಸಮೀಪ ಬಸ್ ಗೆ ಬೆಂಕಿ ತಗಲಿದ ದುರಂತಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಇಬ್ಬರು ಯುವತಿಯರ ಮೃತದೇಹ ಹಸ್ತಾಂತರ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲಾಸ್ಪತ್ರೆ ಆವರಣದಲ್ಲಿ ಪೋಷಕರಿಗೆ ಯುವತಿಯರ ಮೃತದೇಹ ಹಸ್ತಾಂತರ ಮಾಡಲಾಗಿದೆ. ಡಿಎನ್ಎ ಪರೀಕ್ಷೆ ವರದಿ ಆಧರಿಸಿ ನವ್ಯಾ ಮತ್ತು ಮಾನಸ ಶವ ಹಸ್ತಾಂತರಿಸಲಾಗಿದೆ.

ಚನ್ನರಾಯಪಟ್ಟಣ ತಾಲೂಕಿನ ಎ. ಅಂಕನಹಳ್ಳಿ ಮತ್ತು ಕಾಳೇನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಎ. ಅಂಕನಹಳ್ಳಿಯಲ್ಲಿ ನವ್ಯಾ ಅಂತ್ಯಕ್ರಿಯೆ ನೆರವೇರಲಿದೆ. ಕಾಳೇನಹಳ್ಳಿ ಸ್ಮಶಾನದಲ್ಲಿ ಮಾನಸ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಕಂಟೇನರ್ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಸುಟ್ಟು ಕರಕಲಾಗಿತ್ತು. ಸೀ ಬರ್ಡ್ ಸ್ಲೀಪರ್ ಕೋಚ್ ಬಸ್ ನಲ್ಲಿದ್ದ ಆರು ಜನ ಮೃತಪಟ್ಟಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular