HomeKarnatakaBREAKING NEWS: ಮರಕ್ಕೆ ಕಾರ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

BREAKING NEWS: ಮರಕ್ಕೆ ಕಾರ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಸಮೀಪ ಮರಕ್ಕೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ವೆಂಕಟೇಶ್(50), ವೆಂಕಟೇಶ್(48) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರು ಚಳ್ಳಕೆರೆ ತಾಲೂಕಿನ ಜನೇನಹಳ್ಳಿ ನಿವಾಸಿಗಳಾಗಿದ್ದಾರೆ. ಗಾಯಾಳು ಕಿಶೋರ್ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular