ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಏಕವಚನದಲ್ಲಿ ಸಂಬೋಧಿಸಿದ ಸಿದ್ಧರಾಮಯ್ಯ

ಚಿತ್ರದುರ್ಗ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲಿ ಸಂಬೋಧಿಸಿದ್ದಾರೆ.

ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡುತ್ತಿದ್ದ ಸಿಎಂ, ಬಿಜೆಪಿ ಟೀಕಿಸುವ ಭರದಲ್ಲಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಕರೆದಿದ್ದಾರೆ. ಇವರ ಯೋಗ್ಯತೆಗೆ ಪಾಪ ದ್ರೌಪದಿ ಮುರ್ಮು ಶೋಷಿತ ವರ್ಗಕ್ಕೆ ಸೇರಿದವಳು. ಅವಳನ್ನು ನೂತನ ಸಂಸತ್ ಭವನ ಉದ್ಘಾಟನೆಗೆ ಕರೆದಿಲ್ಲ. ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೂ ಕರೆದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಖಂಡಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಹುದ್ದೆಯಿಂದ ಸಿದ್ಧರಾಮಯ್ಯರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಗೌರವಾನ್ವಿತ ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ (ಆ ಪದವನ್ನು ಬರೆಯಲಾರೆ) ಎಂದು ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

https://twitter.com/hd_kumaraswamy/status/1751581582593609734

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read