HomeKarnatakaಡಿಜೆಗಾಗಿ ಹೆದ್ದಾರಿ ತಡೆದು ಪ್ರತಿಭಟನೆ: ಐವರು ಅರೆಸ್ಟ್

ಡಿಜೆಗಾಗಿ ಹೆದ್ದಾರಿ ತಡೆದು ಪ್ರತಿಭಟನೆ: ಐವರು ಅರೆಸ್ಟ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಡಿಜೆ ಗಾಗಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯೂರು ಠಾಣೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ಘಟನೆ ನಡೆದಿತ್ತು. ಶ್ರೀ ಕೃಷ್ಣ ಜಯಂತಿ ಆಚರಣೆ ಹಿನ್ನೆಲೆ ಡಿಜೆ ಗೆ ಅವಕಾಶ ನೀಡಬೇಕೆಂದು ಯುವಕರು ಆಗ್ರಹಿಸಿದ್ದರು.

ಡಿಜೆ ಬಳಕೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಹೆದ್ದಾರಿ ತಡೆದು ಯುವಕರು ಪ್ರತಿಭಟನೆ ನಡೆಸಿದ್ದರು. ಸೆಪ್ಟೆಂಬರ್ 12ರಂದು ರಾಷ್ಟ್ರೀಯ ಹೆದ್ದಾರಿ 48 ತಡೆದು ಪ್ರತಿಭಟನೆ ನಡೆಸಲಾಗಿತ್ತು. ನಂತರ ಹೆಚ್ಚುವರಿ ಸೌಂಡ್ ಬಳಸಿ ಮೆರವಣಿಗೆ ನಡೆಸಿದ ಆರೋಪ ಹಿನ್ನೆಲೆಯಲ್ಲಿ ಹಿರಿಯೂರು ಟೌನ್ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ನಿನ್ನೆ ಸಂಜೆ 5 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದವರ ಬಂಧನಕ್ಕೆ ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ನಾಲ್ವರು ಸಜೀವ ದಹನ

ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ನಾಲ್ವರು ಸಜೀವ ದಹನವಾಗಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಬೆಳಗಾವಿಯ ಚವಾಟ ಗಲ್ಲಿಯಲ್ಲಿ ತಡರಾತ್ರಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ.

ಭಾರತಿ ರಾಜರಾಮ ದಾಮೋನೆ(50), ಶಾರದಾ ದಾಮೋನೆ(45), ಪ್ರಿಯಾ ಗಜಾನನ ದಾಮೋನೆ(28) ಗಂಗಾ ಗಜಾನನ(25) ಮೃತಪಟ್ಟವರು ಎಂದು ಹೇಳಲಾಗಿದೆ. ಗಜಾನನ ರಾಜರಾಮ ದಾಮೋನೆ(65), ರೋಷನ್(21) ಸ್ಥಿತಿ ಗಂಭೀರವಾಗಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಕೂಲಿ ಕೆಲಸ ಮಾಡಿಕೊಂಡು ಕುಟುಂಬದವರು ಜೀವನ ಸಾಗಿಸುತ್ತಿದ್ದರು. ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ. ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸೆಪ್ಟೆಂಬರ್ 15ರಂದು ಜಿಲ್ಲಾ ಮಟ್ಟದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಭಾಗವಹಿಸಲು ಜಿಲ್ಲಾಧಿಕಾರಿ ಕರೆ

ಶಿವಮೊಗ್ಗ: ಸರ್ಕಾರದ ನಿರ್ದೇಶನದಂತೆ ದಿನಾಂಕ 15-09-2026 ರಂದು ಯುವ ಸಂಸತ್ತು ಸಭೆಗೆ ಚಾಲನೆ ನೀಡುವ ಮೂಲಕ ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಶಿವಮೊಗ್ಗ ಇವರ ಜಂಟಿ ಸಹಯೋಗದಲ್ಲಿ ಈ ಕಾರ್ಯಕ್ರಮವು ದಿನಾಂಕ: 15-09-2026 ರ ಬೆಳಿಗ್ಗೆ 10:00 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನ, ಶಿವಮೊಗ್ಗ ಇಲ್ಲಿ ನಡೆಯಲಿದೆ.

ಈ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಎಲ್ಲಾ ಇಲಾಖೆಯ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಕೋರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular