ಚಿತ್ರದುರ್ಗ: ಚಿತ್ರದುರ್ಗದ ಡಿಹೆಚ್ ಒ ಕಚೇರಿ ಬಳಿ ನಿರ್ಮಾಣ ಹಂತದ ಕಟ್ಟಡಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.
ಒಂದು ವಾರದ ಹಿಂದೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನವಜಾತ ಶಿಶು ಪತ್ತೆಯಾಗಿತ್ತು. ಮಗು ಅಳುವುದನ್ನು ಕೇಳಿ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ನಿರ್ಮಾಣ ಹಂತದ ಕಟ್ಟಡದಲ್ಲಿ ನವಜಾತ ಶಿಶು ಪತ್ತೆಯಾಗಿದೆ.
ಡಿಹೆಚ್ ಒ ಕಚೇರಿ ಬಳಿಯೇ ಇರುವ ಕಟ್ಟಡದಲ್ಲಿ ಮಗುವ್ನ ಶವ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ನಗರ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.