ಚಿತ್ರದುರ್ಗ: ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಪೊದೆಯೊಂದರಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಪುಟ್ಟ ಕಂದನ ಅಳಿವಿನ ದನಿ ಕೇಳಿ ಸ್ಥಳಕ್ಕಾಗಮಿಸಿದಾಗ ನವಜಾತ ಶಿಶುವೊಂದು ಪೊದೆಯಲ್ಲಿ ಪತ್ತೆಯಾಗಿದೆ. ತಕ್ಷಣ ಮಗುವನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಮಗುವಿಗೆ ಚಿಕಿತ್ಸೆ ನೀಡಲಾಗಿದೆ.
ಯಾರೋ ಹೊರಗಿನಿಂದ ಮಗುವನ್ನು ತಂದು ಆಸ್ಪತ್ರೆಯ ಬಳಿ ಪೊದೆಯಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸಿಸಿಟಿಯಲ್ಲಿ ಇಬ್ಬರು ಮಹಿಳೆಯರು ಓಡಾಡಿದ ದೃಶ್ಯಗಳು ಸೆರೆಯಾಗಿವೆ. ನವಜಾತ ಕಂದಮ್ಮನನ್ನು ಕ್ರೂರಿಗಳು ಪೊದೆಯಲ್ಲಿ ಬಿಟ್ಟು ಹೋಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಪೋಷಕರ ಪತ್ತೆಗೆ ಮುಂದಾಗಿದ್ದಾರೆ.