HomeLatest Newsಚಿತ್ರದುರ್ಗ ರಸ್ತೆ ಅಪಘಾತ :  ಮೃತ ಮೂವರು 'RSI' ಕುಟುಂಬಕ್ಕೆ ತಲಾ 5 ಲಕ್ಷ ರೂ....

ಚಿತ್ರದುರ್ಗ ರಸ್ತೆ ಅಪಘಾತ :  ಮೃತ ಮೂವರು ‘RSI’ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ CM ಸಿದ್ದರಾಮಯ್ಯ !

ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ (RSI) ಕುಟುಂಬಕ್ಕೆ ಸರ್ಕಾರವು ತಲಾ 5 ಲಕ್ಷರೂ. ಹಾಗೂ ಗಾಯಗೊಂಡವರಿಗೆ ತಲಾ 2 ಲಕ್ಷರೂ. ಪರಿಹಾರ ಘೋಷಿಸಿದೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ನೀಡಲಾಗುವುದು.  ಇದೊಂದು ಅತ್ಯಂತ ದುರದೃಷ್ಟಕರ ಘಟನೆ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳು (RSI) ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳು ಸಾವನ್ನಪ್ಪಿದ್ದಾರೆ. ಕಾರು ಅಪಘಾತದಲ್ಲಿ ಮೃತಪಟ್ಟವರೆಲ್ಲಾ ಬೆಂಗಳೂರು ಮೂಲದ ಪೊಲೀಸ್ ಸಿಬ್ಬಂದಿಗಳು ಎಂದು ಗುರುತಿಸಲಾಗಿದೆ. RSI ಮಂಜುನಾಥ್ (32), RSI ಅಮರೇಶ್ , RSI ಸಚಿನ್ ಮೃತ ದುರ್ದೈವಿಗಳಾಗಿದ್ದಾರೆ. ಮೂವರು ಕೂಡ ರಿಸರ್ವ್ ಪೊಲೀಸ್ ಅಧಿಕಾರಿಗಳಾಗಿದ್ದಾರೆ. ಪೊಲೀಸ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ವಾಹನ ಮತ್ತು ಲಾರಿ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ ಡಿಕ್ಕಿಯ ರಭಸಕ್ಕೆ ವಾಹನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular