HomeKarnatakaBREAKING: ಮಹಿಳೆಯೊಂದಿಗೆ ಸ್ವಾಮೀಜಿ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಮಠದ ಸ್ವಾಮೀಜಿಗೆ ಜನರಿಂದ ಬಿತ್ತು ಗೂಸಾ

BREAKING: ಮಹಿಳೆಯೊಂದಿಗೆ ಸ್ವಾಮೀಜಿ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಮಠದ ಸ್ವಾಮೀಜಿಗೆ ಜನರಿಂದ ಬಿತ್ತು ಗೂಸಾ

ಚಿತ್ರದುರ್ಗ: ತಮ್ಮೇನಹಳ್ಳಿ ಮಠದ ಸ್ವಾಮಿಜಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮಹಿಳೆಯೊಂದಿಗೆ ಸ್ವಾಮೀಜಿ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಸ್ವಾಮೀಜಿಯನ್ನು ಹಿಡಿದ ಮಹಿಳೆ ಸಂಬಂಧಿಕರು ಹಾಗೂ ಜನರು ಹಿಗ್ಗಾ ಮುಗ್ಗಾ ಥಳಿಸಿ ಗೂಸಾ ಕೊಟ್ಟಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತಮ್ಮೇನಹಳ್ಳಿ ಮಠದ ಜಮ್ಮಣ್ಣ ಸ್ವಾಮೀಜಿ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದೆ. ಬಳ್ಳಾರಿ ಮೂಲದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಇದೇ ವಿಚಾರವಾಗಿ ಮಹಿಳೆ ಸಂಬಂಧಿಕರು ಸ್ವಾಮಿಜಿಯನ್ನು ಹಿಡಿದು ಥಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಮ್ಮಣ್ಣ ಸ್ವಾಮೀಜಿ ವಾಮಾಚಾರ, ಅನಾರೋಗ್ಯ ನಿವಾರಣೆ ಎಂದು ಜನರಿಗೆ ವಂಚಿಸುತ್ತಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ. ಈಗ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಸ್ವಾಮಿಜಿಯನ್ನು ಜನರು ಥಳಿಸಿದ್ದಾರೆ. ಘಟನೆ ಬಳಿಕ ಮಹಿಳೆ ಸಂಬಾಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular