HomeKarnatakaಲಾರಿ-ಕಾರು ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ದುರ್ಮರಣ

ಲಾರಿ-ಕಾರು ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ದುರ್ಮರಣ

ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಕೂರು ತಾಲ್ಲೂಕಿನ ರಾಜಾಪುರ ಬಳಿ ನಡೆದಿದೆ.

ಕಾರು ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ತೆರಳುತ್ತಿತ್ತು. ಈ ವೇಳೆ ಲಾರಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಬೆಂಗಳೂರು ಮೂಲದ ರವಿಚಂದ್ರ (40) ಮತ್ತು ಸಂತೋಷ್ (25) ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular