ಚಿತ್ರದುರ್ಗ: ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘೋರ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 150Aದಲ್ಲಿ ಈ ಅಪಘಾತ ಸಂಭವಿಸಿದ್ದು, ಬೊಲೆರೊ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

