HomeKarnatakaBIG UPDATE: ಚಿತ್ರದುರ್ಗದ ಬಳಿ ಬೊಲೆರೊ-ಲಾರಿ ಭೀಕರ ಅಪಘಾತ ಪ್ರಕರಣ: ಒಂದೇ ಕುಟುಂಬದ ಐವರು ದುರ್ಮರಣ

BIG UPDATE: ಚಿತ್ರದುರ್ಗದ ಬಳಿ ಬೊಲೆರೊ-ಲಾರಿ ಭೀಕರ ಅಪಘಾತ ಪ್ರಕರಣ: ಒಂದೇ ಕುಟುಂಬದ ಐವರು ದುರ್ಮರಣ

ಚಿತ್ರದುರ್ಗ: ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಬಳಿ ಈ ದುರಂತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 150Aದಲ್ಲಿ ಈ ಅಪಘಾತ ಸಂಭವಿಸಿದ್ದು, ಬೊಲೆರೊ ವಾಹನದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಸ್ತೆ ಬದಿ ನಿಂತಿದ್ದ ಲಾರಿಗೆ ಬುಲೆರೊ ವಾಹನ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಬಳ್ಳಾರಿ ಮೂಲದವರು. ವೆಂಕಟೇಶ್ (28), ಶಿವಮ್ಮ (25), ಮೀನಾಕ್ಷಿ (16), ಪೂಜಾ (4) ಹಾಗೂ ಒಂದೂವರೆ ವರ್ಷದ ಪರುಶುರಾಮ ಮೃತರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ ಗಾಯಗೊಂಡವರನ್ನು ಮೊಳಕಾಲ್ಮೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular