HomeKarnatakaಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳ ಸಹಿ ದುರುಪಯೋಗ ಮಾಡಿ ನಕಲಿ ಬಿಲ್ ಸೃಷ್ಟಿ: ಐವರು ಆರೋಪಿಗಳು...

ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳ ಸಹಿ ದುರುಪಯೋಗ ಮಾಡಿ ನಕಲಿ ಬಿಲ್ ಸೃಷ್ಟಿ: ಐವರು ಆರೋಪಿಗಳು ಅರೆಸ್ಟ್

ಚಿತ್ರದುರ್ಗ: ಜಿಲ್ಲಾಧಿಕಾರಿ ಹಾಗೂ ಎಡಿಸಿ ಅವರ ಡಿಜಿಟಲ್ ಸಹಿ ದುರುಪಯೋಗ ಪಡಿಸಿಕೊಂಡು 15 ಲಕ್ಷ ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ನಗರಾಭಿವೃದ್ಧಿ ಇಲಾಖೆಯ ಹೊರಗುತ್ತಿಗೆ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ್, ಮೆಹಬೂಬ್ ಬಾಷಾ ಹಾಗೂ ವೆಂಕಟೇಶ್ ಎಂಬ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಇವರಲ್ಲಿ ಸೈಯದ್ ಸಾದಿಕ್ ತಲೆಮರೆಸಿಕೊಂಡಿದ್ದು, ಉಳಿದ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಈ ಸಿಬ್ಬಂದಿಗಳು 15 ಲಕ್ಷ ಮೌಲ್ಯದ ನಕಲಿ ಬಿಲ್ ಸೃಷ್ಟಿಸಿ ಜಿಲ್ಲಾ ಖಜಾನೆಗೆ ಕಳುಹಿಸಿದ್ದರು.ಈ ವೇಳೆ ಸಹಿ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಖಜಾನೆ ಇಲಾಖೆಯಿಂದ ಆಕ್ಷೇಪಣೆ ಬಂದಿತ್ತು. ಈ ವೇಳೆ ಪರಿಶೀಲಿಸಿದಾಗ ವಂಚನೆ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಗರಾಭಿವೃದ್ಧಿ ಕೋಶದ ನಿರ್ದೇಶಕಿ ರೇಷ್ಮಾ ಹಾನಗಲ್ ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular