ಚಿತ್ರದುರ್ಗ: ಗಂಡ-ಹೆಂಡತಿ ನಡುವೆ ಜಗಳ ಬಿಡಿಸಲು ಹೋದ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದು, ಗಂಭೀರವಾಗಿ ಗಾಯಗೊಂಡ ಆತ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಇಲ್ಲಿನ ಬುದ್ಧ ವೃತ್ತದಲ್ಲಿ ಈ ಘಟನೆ ನಡೆದಿದೆ. ಸಾದಿಕ್ ವುಲ್ಲಾ ಎಂಬತ ತನ್ನ ಪತ್ನಿಯೊಂದಿಗೆ ನಡುರಸ್ತೆಯಲ್ಲಿಯೇ ಗಲಾಟೆ ಮಾಡುತ್ತಿದ್ದ. ಈ ವೇಳೆ ಗಂಡ-ಹೆಂಡತಿ ಜಗಳ ಬಿಡಿಸಲು ಹೋದ ತಾಜ್ ಪಿರ್ (42) ಎಂಬಾತನ ಮೇಲೆ ಸಾದಿಕ್ ವುಲ್ಲಾ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.
ಪರಿಣಾಮ ರಾಜ್ ಪಿರ್ ಗಂಭೀರವಾಗಿ ಗಾಯಗೊಂದು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

