HomeLatest NewsBREAKING: ದೊಣ್ಣೆಯಿಂದ ತಲೆಗೆ ಹೊಡೆದು ಪತ್ನಿಯನ್ನೇ ಕೊಲೆಗೈದ ಪತಿ

BREAKING: ದೊಣ್ಣೆಯಿಂದ ತಲೆಗೆ ಹೊಡೆದು ಪತ್ನಿಯನ್ನೇ ಕೊಲೆಗೈದ ಪತಿ

ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ ಹಲ್ಲೆ, ಕೌಟುಂಬಿಕ ಕಲಹದಂತಹ ಘಟನೆ ಕೊಲೆಯಲ್ಲಿ ಅಂತ್ಯವಾಗುತ್ತಿರುವ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಸಂಬಂಧಗಳು, ಕೌಟುಂಬಿಕ ನೆಲೆಗಟ್ಟು ಸಡಿಲಗೊಳುತ್ತಿದ್ದು, ಮನುಷ್ಯ ಕ್ರೂರಿಯಾಗಿ ಬದಲಾಗುತ್ತಿದ್ದಾನೆ. ಇಲ್ಲೋರ್ವ ಪತಿ ಮಹಾಶಯ ಪತ್ನಿಯನ್ನೇ ದೊಣ್ಣೆಯಿಂದ ಹೊಡೆದು ಕೊಂದಿರುವ ಘಟನೆ ಬೆಳಕಿಗೆ ಬಂದಿದೆ.

ಕೌಟುಂಬಿಕ ಕಲಹದಿಂದ ಕೋಪದ ಕೈಗೆ ಬುದ್ಧಿಕೊಟ್ಟ ಪತಿ ಮಹಾಶಯ ಪತ್ನಿಯ ತಲೆ ಮೇಲೆ ದೊಣ್ಣೆಯಿಂದ ಹೊಡೆದು ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮಮತಾ (45) ಪತಿಯಿಂದ ಹತ್ಯೆಯಾದ ಪತ್ನಿ. ರವಿಕುಮಾರ್ ಹೆಂಡತಿಯನ್ನೇ ಕೊಲೆಗೈದ ಗಂಡ. ಆರೋಪಿ ರವಿಕುಮಾರ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಲೆ ಅಕ್ರಮ ಸಂಬಂಧದಿಂದಾಗಿ ಹತ್ಯೆ ಮಾಡಿದ್ದಾಗಿ ಹೇಳಿದ್ದಾನೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿ ಪತಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಪತಿ-ಪತ್ನಿ ನಡುವಿನ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular