HomeLatest Newsಚಿತ್ರದುರ್ಗದ ಮೃತ ವಿದ್ಯಾರ್ಥಿನಿ ವರ್ಷಿತಾ ತಾಯಿಗೆ ಅಡುಗೆ ಸಹಾಯಕರ ನೌಕರಿ

ಚಿತ್ರದುರ್ಗದ ಮೃತ ವಿದ್ಯಾರ್ಥಿನಿ ವರ್ಷಿತಾ ತಾಯಿಗೆ ಅಡುಗೆ ಸಹಾಯಕರ ನೌಕರಿ

ಹಿರಿಯೂರು ತಾಲ್ಲೂಕಿನ ಕೊವೇರಹಟ್ಟಿಯ ಮೃತ ವಿದ್ಯಾರ್ಥಿನಿ ವರ್ಷಿತಾ ಅವರ ತಾಯಿಗೆ ಅಡುಗೆ ಸಹಾಯಕರ ನೌಕರಿ ಆದೇಶವನ್ನು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಿತರಿಸಿದರು.

ಕೋವೇರಹಟ್ಟಿಯ ವರ್ಷಿತಾ ಎಂಬ ವಿದ್ಯಾರ್ಥಿನಿಯ ಮೃತ ದೇಹ ಇತ್ತೀಚೆಗೆ ಚಿತ್ರದುರ್ಗ ತಾಲ್ಲೂಕಿನ ಗೋನೂರು ಬಳಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಆರ್ಥಿಕವಾಗಿ ಆಧಾರ ನೀಡುವ ಉದ್ದೇಶದಿಂದ, ವರ್ಷಿತಾ ಅವರ ತಾಯಿ ಟಿ. ಜ್ಯೋತಿ ಅವರಿಗೆ ಬುರುಜನರೊಪ್ಪದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಅಡುಗೆ ಸಹಾಯಕರ ಹುದ್ದೆಗೆ ನೇಮಕ ಮಾಡಲಾಗಿದೆ.ಈ ಸಂದರ್ಭದಲ್ಲಿ ಮೃತ ವಿದ್ಯಾರ್ಥಿನಿ ವರ್ಷಿತಾ ತಂದೆ ತಿಪ್ಪೇಸ್ವಾಮಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಇದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular