HomeKarnatakaಕಲುಷಿತ ನೀರು ಸೇವನೆಯಿಂದ 108 ಮಂದಿ ಅಸ್ವಸ್ಥರಾಗಿದ್ದ ಚಿನ್ನೇನಹಳ್ಳಿಯಲ್ಲಿ ಕಾಲರಾ ಪತ್ತೆ

ಕಲುಷಿತ ನೀರು ಸೇವನೆಯಿಂದ 108 ಮಂದಿ ಅಸ್ವಸ್ಥರಾಗಿದ್ದ ಚಿನ್ನೇನಹಳ್ಳಿಯಲ್ಲಿ ಕಾಲರಾ ಪತ್ತೆ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಕಾಲರಾ ಪ್ರಕರಣ ದಾಖಲಾಗಿದೆ. ಕೃಷ್ಣಪ್ಪ(32) ಎಂಬುವರಿಗೆ ಕಾಲರಾ ಇರುವುದು ದೃಢಪಟ್ಟಿದೆ.

ಕಳೆದ ವಾರ ಕಲುಷಿತ ನೀರು ಸೇವನೆಯಿಂದ ಚಿನ್ನೇನಹಳ್ಳಿಯ 108 ಮಂದಿ ವಾಂತಿ ಭೇದಿಯಿಂದ ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಕೃಷ್ಣಪ್ಪ ಸ್ವಇಚ್ಛೆಯಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದರು. ಅವರ ಪರೀಕ್ಷಾ ವರದಿ ಬಂದಿದ್ದು, ಕಾಲರಾ ಇರುವುದು ದೃಢಪಟ್ಟಿದೆ.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಮಂಜುನಾಥ್ ಚಿನ್ನೇನಹಳ್ಳಿಯ ಒಂದು ಕಾಲರಾ ಪ್ರಕರಣ ಪತ್ತೆಯಾಗಿದ್ದು, ಇಲಾಖೆಯಿಂದ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular