HomeKarnatakaBREAKING: ಮಾಜಿ ಶಾಸಕ ಡಿ.ಎಸ್. ವೀರಯ್ಯ ಅರೆಸ್ಟ್

BREAKING: ಮಾಜಿ ಶಾಸಕ ಡಿ.ಎಸ್. ವೀರಯ್ಯ ಅರೆಸ್ಟ್

ಬೆಂಗಳೂರು: ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಬಂಧಿಸಿದೆ. ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ. ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ.

ವೀರಯ್ಯ ಅಧ್ಯಕ್ಷರಾಗಿದ್ದಾಗ 47 ಕೋಟಿ ರೂಪಾಯಿ ಹಗರಣ ನಡೆದ ಆರೋಪವಿದ್ದು, ತನಿಖೆ ನಡೆಸಿದ ಸಿಐಡಿ ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಬಂಧಿಸಿದೆ.

2021 ರಿಂದ 2023ರ ನಡುವೆ ನಡೆದಿದೆ ಎನ್ನಲಾಗಿರುವ ಅಕ್ರಮದ ಕುರಿತಾಗಿ ಹಾಲಿ ವ್ಯವಸ್ಥಾಪಕ ನಿರ್ದೇಶಕರು ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದ್ದರು. 2023ರ ಸೆಪ್ಟಂಬರ್ 23ರಂದು ಎಫ್ಐಆರ್ ದಾಖಲಾಗಿದ್ದು, ಇದೇ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ರಮ ಪ್ರಕರಣದ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳ ತಂಡ ದೂರುದಾರರಿಂದ ಮಾಹಿತಿ ಪಡೆದುಕೊಂಡು 600ಕ್ಕೂ ಹೆಚ್ಚು ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸಿತ್ತು. ಅಕ್ರಮದ ಬಗ್ಗೆ ತನಿಖೆ ಮುಂದುವರೆಸಿದ ಸಿಐಡಿ ಇದೀಗ ಮಾಜಿ ಶಾಸಕರನ್ನು ಬಂಧಿಸಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular