ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಮಾಹಿತಿ ನೀಡಿದ್ದು, ಭ್ರೂಣ ಪತ್ತೆ ಪ್ರಕರಣದ ಗಂಭೀರತೆಯನ್ನು ಮನಗಂಡು ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೋಲೀಸರು ಭ್ರೂಣ ಹತ್ಯೆ ಪ್ರಕರಣವನ್ನು ಪತ್ತೆ ಮಾಡಿದ್ದು, ಇಬ್ಬರು ವೈದ್ಯರು ಸೇರಿ 9 ಮಂದಿಯನ್ನು ಬಂಧಿಸಿದ್ದಾರೆ. ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಇಲಾಖಾ ತನಿಖೆಯನ್ನು ಬಾಕಿ ಇರಿಸಿ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.
ಭ್ರೂಣ ಪತ್ತೆ ಪ್ರಕರಣದ ಗಂಭೀರತೆಯನ್ನು ಮನಗಂಡು ಈ ಪ್ರಕರಣವನ್ನು CID ತನಿಖೆಗೆ ಒಪ್ಪಿಸಲಾಗುತ್ತಿದೆ.
– ಮುಖ್ಯಮಂತ್ರಿ @siddaramaiah #ಭ್ರೂಣಪತ್ತೆ— CM of Karnataka (@CMofKarnataka) November 30, 2023


